عن أبي هريرة رضي الله عنه قال:
لَعَنَ رَسُولُ اللهِ صَلَّى اللهُ عَلَيْهِ وَسَلَّمَ الرَّاشِيَ وَالْمُرْتَشِيَ فِي الْحُكْمِ.
[صحيح] - [رواه الترمذي وأحمد] - [سنن الترمذي: 1336]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ತೀರ್ಪಿಗಾಗಿ ಲಂಚ ನೀಡುವವರನ್ನು ಮತ್ತು ಲಂಚ ಪಡೆಯುವವರನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶಪಿಸಿದ್ದಾರೆ."
[صحيح] - [رواه الترمذي وأحمد] - [سنن الترمذي - 1336]
ಲಂಚ ನೀಡುವವರು ಮತ್ತು ಲಂಚ ಪಡೆಯುವವರು ಅಲ್ಲಾಹನ ದಯೆಯಿಂದ ದೂರವಾಗಲಿ ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸಿದ್ದಾರೆ.
ತಮ್ಮ ಅನೈತಿಕ ಉದ್ದೇಶವನ್ನು ನೆರವೇರಿಸುವುದಕ್ಕಾಗಿ ತೀರ್ಪು ತಮ್ಮ ಪರವಾಗಿ ಬರುವಂತೆ ಮಾಡಲು ನ್ಯಾಯಾಧೀಶರಿಗೆ ಲಂಚ ಕೊಡುವುದು ಇದರಲ್ಲಿ ಪ್ರಮುಖವಾಗಿದೆ.