عن جابر رضي الله عنه:
أَنَّ رَجُلًا سَأَلَ رَسُولَ اللهِ صَلَّى اللهُ عَلَيْهِ وَسَلَّمَ، فَقَالَ: أَرَأَيْتَ إِذَا صَلَّيْتُ الصَّلَوَاتِ الْمَكْتُوبَاتِ، وَصُمْتُ رَمَضَانَ، وَأَحْلَلْتُ الْحَلَالَ، وَحَرَّمْتُ الْحَرَامَ، وَلَمْ أَزِدْ عَلَى ذَلِكَ شَيْئًا، أَأَدْخُلُ الْجَنَّةَ؟ قَالَ: «نَعَمْ»، قَالَ: وَاللهِ لَا أَزِيدُ عَلَى ذَلِكَ شَيْئًا.
المزيد
ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಐದು ವೇಳೆಯ ಕಡ್ಡಾಯ ನಮಾಝ್ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ, ಮತ್ತು ಇವುಗಳಿಗಿಂತ ಹೆಚ್ಚು ಏನೂ ನಿರ್ವಹಿಸದಿದ್ದರೆ, ನಾನು ಸ್ವರ್ಗಕ್ಕೆ ಹೋಗುವೆನೇ?" ಅವರು ಉತ್ತರಿಸಿದರು: "ಹೌದು." ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ನಾನು ಅವುಗಳಿಗಿಂತ ಏನೂ ಹೆಚ್ಚಿಸುವುದಿಲ್ಲ."