ವರ್ಗ: The Creed . Names and Rulings .
+ -

عن جابر رضي الله عنه:
أَنَّ رَجُلًا سَأَلَ رَسُولَ اللهِ صَلَّى اللهُ عَلَيْهِ وَسَلَّمَ، فَقَالَ: أَرَأَيْتَ إِذَا صَلَّيْتُ الصَّلَوَاتِ الْمَكْتُوبَاتِ، وَصُمْتُ رَمَضَانَ، وَأَحْلَلْتُ الْحَلَالَ، وَحَرَّمْتُ الْحَرَامَ، وَلَمْ أَزِدْ عَلَى ذَلِكَ شَيْئًا، أَأَدْخُلُ الْجَنَّةَ؟ قَالَ: «نَعَمْ»، قَالَ: وَاللهِ لَا أَزِيدُ عَلَى ذَلِكَ شَيْئًا.

[صحيح] - [رواه مسلم] - [صحيح مسلم: 15]
المزيــد ...

ಜಾಬಿರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
ಒಬ್ಬ ವ್ಯಕ್ತಿ ಅಲ್ಲಾಹನ ಸಂದೇಶವಾಹಕರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದರು: "ನಾನು ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ನಿರ್ವಹಿಸಿದರೆ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸಿದರೆ, ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿದರೆ, ಮತ್ತು ಇವುಗಳಿಗಿಂತ ಹೆಚ್ಚು ಏನೂ ನಿರ್ವಹಿಸದಿದ್ದರೆ, ನಾನು ಸ್ವರ್ಗಕ್ಕೆ ಹೋಗುವೆನೇ?" ಅವರು ಉತ್ತರಿಸಿದರು: "ಹೌದು." ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ನಾನು ಅವುಗಳಿಗಿಂತ ಏನೂ ಹೆಚ್ಚಿಸುವುದಿಲ್ಲ."

[صحيح] - [رواه مسلم] - [صحيح مسلم - 15]

ವಿವರಣೆ

ಈ ಹದೀಸ್‌ನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿವರಿಸುವುದೇನೆಂದರೆ, ಒಬ್ಬ ವ್ಯಕ್ತಿ ಯಾವುದೇ ಐಚ್ಛಿಕ ನಮಾಝ್‌ಗಳನ್ನು ನಿರ್ವಹಿಸದೆ ಕೇವಲ ಐದು ವೇಳೆಯ ಕಡ್ಡಾಯ ನಮಾಝ್‌ಗಳನ್ನು ಮಾತ್ರ ನಿರ್ವಹಿಸಿದರೆ, ಮತ್ತು ಯಾವುದೇ ಐಚ್ಚಿಕ ಉಪವಾಸಗಳನ್ನು ಆಚರಿಸದೆ ಕೇವಲ ರಮದಾನ್ ತಿಂಗಳಲ್ಲಿ ಮಾತ್ರ ಉಪವಾಸ ಆಚರಿಸಿದರೆ, ಮತ್ತು ಧರ್ಮಸಮ್ಮತವಾಗಿರುವುದನ್ನು ಧರ್ಮಸಮ್ಮತವೆಂದು ಪರಿಗಣಿಸಿ ಅವುಗಳನ್ನು ನಿರ್ವಹಿಸಿದರೆ, ಮತ್ತು ಧರ್ಮನಿಷಿದ್ಧವಾಗಿರುವುದನ್ನು ಧರ್ಮನಿಷಿದ್ಧವೆಂದು ಪರಿಗಣಿಸಿ, ಅವುಗಳಿಂದ ದೂರ ಸರಿದರೆ, ಅವನು ಖಂಡಿತವಾಗಿಯೂ ಸ್ವರ್ಗಕ್ಕೆ ಹೋಗುತ್ತಾನೆ.

ಅನುವಾದ: ಆಂಗ್ಲ ಉರ್ದು ಸ್ಪ್ಯಾನಿಷ್ ಇಂಡೋನೇಷಿಯನ್ ಉಯ್ಘರ್ ಬಂಗಾಳಿ ಫ್ರೆಂಚ್ ತುರ್ಕಿ ರಷ್ಯನ್ ಬೊಸ್ನಿಯನ್ ಸಿಂಹಳೀಯ ಹಿಂದಿ ಚೀನೀ ಪರ್ಷಿಯನ್ ವಿಯೆಟ್ನಾಮೀಸ್ ಟ್ಯಾಗಲಾಗ್ ಕುರ್ದಿಷ್ ಹೌಸಾ ಪೋರ್ಚುಗೀಸ್ ಮಲಯಾಳಂ ತೆಲುಗು ಸ್ವಾಹಿಲಿ ತಮಿಳು ಬರ್ಮೀ ಥಾಯ್ ಜರ್ಮನ್ ಪಶ್ತೋ الأسامية الألبانية السويدية الأمهرية الهولندية الغوجاراتية القيرقيزية النيبالية اليوروبا الليتوانية الدرية الصربية الصومالية الطاجيكية الكينياروندا الرومانية المجرية التشيكية الموري المالاجاشية الإيطالية الأورومو الولوف البلغارية الأذربيجانية اليونانية الأوزبكية الأوكرانية الجورجية اللينجالا المقدونية
ಅನುವಾದಗಳನ್ನು ತೋರಿಸಿ

ಹದೀಸಿನ ಪ್ರಯೋಜನಗಳು

  1. ಕಡ್ಡಾಯ ಕಾರ್ಯಗಳನ್ನು ನಿರ್ವಹಿಸಲು ಮತ್ತು ನಿಷೇಧಿಸಲಾದ ಕಾರ್ಯಗಳನ್ನು ತೊರೆಯಲು ಮುಸಲ್ಮಾನನು ಉತ್ಸಾಹ ತೋರಬೇಕು, ಹಾಗೂ ಸ್ವರ್ಗ ಪ್ರವೇಶವು ಅವನ ಗುರಿಯಾಗಿರಬೇಕೆಂದು ಈ ಹದೀಸ್ ತಿಳಿಸುತ್ತದೆ.
  2. ಧರ್ಮಸಮ್ಮತವಾಗಿರುವ ಕಾರ್ಯಗಳನ್ನು ಮಾಡುವುದು ಮತ್ತು ಅವು ಧರ್ಮಸಮ್ಮತವೆಂದು ನಂಬುವುದರ ಮಹತ್ವವನ್ನು, ಹಾಗೆಯೇ ಧರ್ಮವು ನಿಷೇಧಿಸಿದ ಕಾರ್ಯಗಳಿಂದ ದೂರ ಸರಿಯುವುದು ಮತ್ತು ಅವು ಧರ್ಮನಿಷಿದ್ಧವೆಂದು ನಂಬುವುದರ ಮಹತ್ವವನ್ನು ಈ ಹದೀಸ್ ತಿಳಿಸುತ್ತದೆ.
  3. ಕಡ್ಡಾಯ ಕಾರ್ಯಗಳನ್ನು ನಿರ್ವಹಿಸುವುದು ಮತ್ತು ನಿಷೇಧಿತ ಕಾರ್ಯಗಳಿಂದ ದೂರವಾಗುವುದು ಸ್ವರ್ಗ ಪ್ರವೇಶಕ್ಕೆ ಕಾರಣವೆಂದು ಈ ಹದೀಸ್ ತಿಳಿಸುತ್ತದೆ.
ಇನ್ನಷ್ಟು