عن المقدام بن معدِيْكَرِب رضي الله عنه قال: قال رسول الله صلى الله عليه وسلم:
«أَلَا هَلْ عَسَى رَجُلٌ يَبْلُغُهُ الْحَدِيثُ عَنِّي وَهُوَ مُتَّكِئٌ عَلَى أَرِيكَتِهِ فَيَقُولُ: بَيْنَنَا وَبَيْنَكُمْ كِتَابُ اللهِ، فَمَا وَجَدْنَا فِيهِ حَلَالًا اسْتَحْلَلْنَاهُ، وَمَا وَجَدْنَا فِيهِ حَرَامًا حَرَّمْنَاهُ، وَإِنَّ مَا حَرَّمَ رَسُولُ اللهِ صَلَّى اللهُ عَلَيْهِ وَسَلَّمَ كَمَا حَرَّمَ اللهُ».
[صحيح] - [رواه أبو داود والترمذي وابن ماجه] - [سنن الترمذي: 2664]
المزيــد ...
ಮಿಕ್ದಾಮ್ ಬಿನ್ ಮಅದೀ ಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಎಚ್ಚರಾ! ಒರಗು ಕುರ್ಚಿಯಲ್ಲಿ ಕುಳಿತಿರುವ ಒಬ್ಬ ವ್ಯಕ್ತಿಗೆ ನಾನು ಹೇಳಿದ ಒಂದು ಹದೀಸ್ ತಲುಪುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ಬಳಿ ಅಲ್ಲಾಹನ ಗ್ರಂಥವಿದೆ. ಅದರಲ್ಲಿ ಏನು ಅನುಮತಿಸಲಾಗಿದೆಯೆಂದು ನಾವು ಕಾಣುತ್ತೇವೆಯೋ ಅದನ್ನು ನಾವು ಧರ್ಮಸಮ್ಮತವೆಂದು ಪರಿಗಣಿಸುತ್ತೇವೆ., ಅದರಲ್ಲಿ ಏನು ನಿಷೇಧಿಸಲಾಗಿದೆಯೆಂದು ನಾವು ಕಾಣುತ್ತೇವೆಯೋ, ಅದನ್ನು ನಾವು ಧರ್ಮನಿಷಿದ್ಧವೆಂದು ಪರಿಗಣಿಸುತ್ತೇವೆ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಿಷೇಧಿಸಿದ್ದೆಲ್ಲವೂ ಅಲ್ಲಾಹು ನಿಷೇಧಿಸಿದಂತೆಯೇ ಆಗಿದೆ."
[صحيح] - [رواه أبو داود والترمذي وابن ماجه] - [سنن الترمذي - 2664]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಸಮೀಪದಲ್ಲಿ ಒಂದು ಕಾಲವು ಬರಲಿದೆ. ಆಗ ಜನರಲ್ಲಿ ಒಬ್ಬನು ಆರಾಮಕುರ್ಚಿಯಲ್ಲಿ ಒರಗಿಕೊಂಡಿರುತ್ತಾನೆ. ನನ್ನ ಒಂದು ಹದೀಸನ್ನು ಅವನ ಮುಂದೆ ಪಠಿಸಲಾಗುತ್ತದೆ. ಆಗ ಅವನು ಹೇಳುತ್ತಾನೆ: ನಮ್ಮ ವಿಷಯದಲ್ಲಿ ಪವಿತ್ರ ಕುರ್‌ಆನ್ ತೀರ್ಪು ನೀಡುತ್ತದೆ. ಅದು ನಮಗೆ ಯಥೇಷ್ಟ ಸಾಕು. ಅದರಲ್ಲಿ ಏನು ಅನುಮತಿಸಲಾಗಿದೆಯೆಂದು ನಾವು ಕಾಣುತ್ತೇವೆಯೋ, ಅದನ್ನು ನಾವು ಸ್ವೀಕರಿಸುತ್ತೇವೆ. ಅದರಲ್ಲಿ ಏನು ನಿಷೇಧಿಸಲಾಗಿದೆಯೆಂದು ನಾವು ಕಾಣುತ್ತೇವೆಯೋ, ಅದನ್ನು ನಾವು ತಿರಸ್ಕರಿಸುತ್ತೇವೆ. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸುನ್ನತ್‌ನಲ್ಲಿ (ಹದೀಸ್‌ನಲ್ಲಿ) ನಿಷೇಧಿಸಲಾಗಿರುವ ಅಥವಾ ವಿರೋಧಿಸಲಾಗಿರುವ ವಿಷಯಗಳೆಲ್ಲವೂ ಪವಿತ್ರ ಕುರ್‌ಆನಿನಲ್ಲಿ ಅಲ್ಲಾಹು ನಿಷೇಧಿಸಿರುವ ವಿಷಯಗಳ ಅದೇ ನಿಯಮವನ್ನು ಹೊಂದಿವೆ ಎಂದು ತಿಳಿಸುತ್ತಾರೆ. ಏಕೆಂದರೆ ಅವರು ಅಲ್ಲಾಹನ ಸಂದೇಶವನ್ನು ಜನರಿಗೆ ತಲುಪಿಸಿಕೊಡುವವರು.