+ -

عَنْ أَنَسٍ رضي الله عنه قَالَ:
جَاءَ رَجُلٌ إِلَى النَّبِيِّ صَلَّى اللهُ عَلَيْهِ وَسَلَّمَ فَقَالَ: يَا رَسُولَ اللهِ، مَا تَرَكْتُ حَاجَّةً وَلَا دَاجَّةً إِلَّا قَدْ أَتَيْتُ، قَالَ: «أَلَيْسَ تَشْهَدُ أَنْ لَا إِلَهَ إِلَّا اللهُ وَأَنَّ مُحَمَّدًا رَسُولُ اللهِ؟» ثَلَاثَ مَرَّاتٍ. قَالَ: نَعَمْ، قَالَ: «فَإِنَّ ذَلِكَ يَأْتِي عَلَى ذَلِكَ».

[صحيح] - [رواه أبو يعلى والطبراني والضياء المقدسي] - [الأحاديث المختارة للضياء المقدسي: 1773]
المزيــد ...

ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು:
ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಚಿಕ್ಕ ಮತ್ತು ದೊಡ್ಡ ಯಾವುದೇ ಪಾಪಗಳನ್ನು ಮಾಡದೆ ಬಿಟ್ಟಿಲ್ಲ." ಅವರು ಕೇಳಿದರು: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನೀನು ಸಾಕ್ಷಿ ವಹಿಸುವುದಿಲ್ಲವೇ?" ಅವರು ಇದನ್ನು ಮೂರು ಬಾರಿ ಕೇಳಿದರು. ಆ ವ್ಯಕ್ತಿ ಹೌದು ಎಂದು ಉತ್ತರಿಸಿದರು. ಅವರು ಹೇಳಿದರು: "ನಿಶ್ಚಯವಾಗಿಯೂ ಇದು ಅದರ ಮೇಲೆ ಬರುತ್ತದೆ."

[صحيح] - [رواه أبو يعلى والطبراني والضياء المقدسي] - [الأحاديث المختارة للضياء المقدسي - 1773]

ವಿವರಣೆ

ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಎಲ್ಲಾ ಪಾಪಗಳನ್ನು ಮತ್ತು ದೋಷಗಳನ್ನು ಮಾಡಿದ್ದೇನೆ. ಚಿಕ್ಕ ಮತ್ತು ದೊಡ್ಡ ಪಾಪಗಳಲ್ಲಿ ಯಾವುದನ್ನು ನಾನು ಮಾಡದೆ ಬಿಟ್ಟಿಲ್ಲ. ನನಗೆ ಕ್ಷಮೆ ಸಿಗಬಹುದೇ?" ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳುತ್ತಾರೆ: "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನೀನು ಸಾಕ್ಷಿ ವಹಿಸುವುದಿಲ್ಲವೇ?" ಅವರು ಇದನ್ನು ಮೂರು ಬಾರಿ ಕೇಳಿದರು. ಆಗ ಆ ವ್ಯಕ್ತಿ: "ಹೌದು, ನಾನು ಸಾಕ್ಷಿ ವಹಿಸುತ್ತೇನೆ" ಎಂದು ಉತ್ತರಿಸಿದರು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸಾಕ್ಷಿ ವಚನಗಳ ಶ್ರೇಷ್ಠತೆಯನ್ನು ಮತ್ತು ಅದು ಪಾಪಗಳನ್ನು ಪರಿಹರಿಸುತ್ತದೆ ಎಂದು ತಿಳಿಸಿದರು. ಹಾಗೆಯೇ ಪಶ್ಚಾತಾಪವು ಅದರ ಮುಂಚಿನ ಪಾಪಗಳನ್ನು ಅಳಿಸುತ್ತದೆ ಎಂದರು.

ಅನುವಾದ: ಆಂಗ್ಲ ಉರ್ದು ಸ್ಪ್ಯಾನಿಷ್ ಇಂಡೋನೇಷಿಯನ್ ಉಯ್ಘರ್ ಬಂಗಾಳಿ ಫ್ರೆಂಚ್ ತುರ್ಕಿ ರಷ್ಯನ್ ಬೊಸ್ನಿಯನ್ ಸಿಂಹಳೀಯ ಹಿಂದಿ ಪರ್ಷಿಯನ್ ವಿಯೆಟ್ನಾಮೀಸ್ ಟ್ಯಾಗಲಾಗ್ ಕುರ್ದಿಷ್ ಹೌಸಾ ಪೋರ್ಚುಗೀಸ್ ಮಲಯಾಳಂ ತೆಲುಗು ಸ್ವಾಹಿಲಿ ತಮಿಳು ಬರ್ಮೀ ಥಾಯ್ ಜರ್ಮನ್ ಪಶ್ತೋ الأسامية الألبانية السويدية الأمهرية الهولندية الغوجاراتية القيرقيزية النيبالية اليوروبا الليتوانية الدرية الصربية الصومالية الطاجيكية الكينياروندا الرومانية المجرية التشيكية الموري المالاجاشية الإيطالية الأورومو الولوف البلغارية الأذربيجانية اليونانية الأوزبكية الأوكرانية الجورجية اللينجالا المقدونية
ಅನುವಾದಗಳನ್ನು ತೋರಿಸಿ

ಹದೀಸಿನ ಪ್ರಯೋಜನಗಳು

  1. ಎರಡು ಸಾಕ್ಷಿ ವಚನಗಳ ಮಹಿಮೆಯನ್ನು ಮತ್ತು ಅದನ್ನು ಹೃದಯದಿಂದ ಪ್ರಾಮಾಣಿಕವಾಗಿ ಉಚ್ಚರಿಸಿದ ವ್ಯಕ್ತಿಯ ಪಾಪಗಳಿಗಿಂತಲೂ ಅವು ಹೆಚ್ಚು ಭಾರವಾಗಿವೆ ಎಂದು ಈ ಹದೀಸ್ ತಿಳಿಸುತ್ತದೆ.
  2. ಇಸ್ಲಾಂ ಅದಕ್ಕೆ ಮುಂಚೆ ಮಾಡಿದ ಪಾಪಗಳೆಲ್ಲವನ್ನೂ ಅಳಿಸುತ್ತದೆ.
  3. ಪ್ರಾಮಾಣಿಕ ಪಶ್ಚಾತಾಪವು ಕೂಡ ಅದಕ್ಕಿಂತ ಮುಂಚಿನ ಪಾಪಗಳನ್ನು ಅಳಿಸುತ್ತದೆ.
  4. ವಿಷಯವನ್ನು ಕಲಿಸುವಾಗ ಪುನರಾವರ್ತಿಸುವುದು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಚರ್ಯೆಯಾಗಿದೆ.
  5. ಎರಡು ಸಾಕ್ಷಿ ವಚನಗಳ ಶ್ರೇಷ್ಠತೆಯನ್ನು ಮತ್ತು ಅವು ಶಾಶ್ವತ ನರಕವಾಸದಿಂದ ಮುಕ್ತಿ ನೀಡುವ ಮಾರ್ಗವಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ.
ಇನ್ನಷ್ಟು