عَنْ مُعَاذٍ رَضِيَ اللَّهُ عَنْهُ، قَالَ:
كُنْتُ رِدْفَ النَّبِيِّ صَلَّى اللهُ عَلَيْهِ وَسَلَّمَ عَلَى حِمَارٍ يُقَالُ لَهُ عُفَيْرٌ، فَقَالَ: «يَا مُعَاذُ، هَلْ تَدْرِي حَقَّ اللَّهِ عَلَى عِبَادِهِ، وَمَا حَقُّ العِبَادِ عَلَى اللَّهِ؟»، قُلْتُ: اللَّهُ وَرَسُولُهُ أَعْلَمُ، قَالَ: «فَإِنَّ حَقَّ اللَّهِ عَلَى العِبَادِ أَنْ يَعْبُدُوهُ وَلا يُشْرِكُوا بِهِ شَيْئًا، وَحَقَّ العِبَادِ عَلَى اللَّهِ أَنْ لا يُعَذِّبَ مَنْ لا يُشْرِكُ بِهِ شَيْئًا»، فَقُلْتُ: يَا رَسُولَ اللَّهِ أَفَلاَ أُبَشِّرُ بِهِ النَّاسَ؟ قَالَ: «لا تُبَشِّرْهُمْ، فَيَتَّكِلُوا».
[صحيح] - [متفق عليه] - [صحيح البخاري: 2856]
المزيــد ...
ಮುಆದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
ಒಮ್ಮೆ ಉಫೈರ್ ಎಂಬ ಹೆಸರಿನ ಒಂದು ಕತ್ತೆಯ ಮೇಲೆ ನಾನು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂದೆ ಕುಳಿತು ಪ್ರಯಾಣ ಮಾಡುತ್ತಿದ್ದೆ. ಆಗ ಅವರು ಹೇಳಿದರು: "ಓ ಮುಆದ್! ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕು ಏನೆಂದು ನಿನಗೆ ತಿಳಿದಿದೆಯೇ?" ನಾನು ಹೇಳಿದೆ: "ಅಲ್ಲಾಹು ಮತ್ತು ಅವನ ಸಂದೇಶವಾಹಕರೇ ಹೆಚ್ಚು ತಿಳಿದವರು." ಅವರು ಹೇಳಿದರು: "ಅಲ್ಲಾಹನನ್ನು ಮಾತ್ರ ಆರಾಧಿಸುವುದು ಹಾಗೂ ಅವನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದಿರುವುದು ದಾಸರ ಮೇಲಿರುವ ಅಲ್ಲಾಹನ ಹಕ್ಕಾಗಿದೆ. ತನ್ನೊಂದಿಗೆ ಏನನ್ನೂ ಸಹಭಾಗಿತ್ವ (ಶಿರ್ಕ್) ಮಾಡದವರನ್ನು ಶಿಕ್ಷಿಸದಿರುವುದು ಅಲ್ಲಾಹನ ಮೇಲಿರುವ ದಾಸರ ಹಕ್ಕಾಗಿದೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನಾನು ಜನರಿಗೆ ಈ ಸಿಹಿಸುದ್ದಿಯನ್ನು ತಿಳಿಸಲೇ?" ಅವರು ಉತ್ತರಿಸಿದರು: "ಬೇಡ, ಅವರಿಗೆ ಸಿಹಿ ಸುದ್ದಿ ತಿಳಿಸಬೇಡ. ಅವರು ಅದರ ಮೇಲೆ ಅವಲಂಬಿತರಾಗಬಹುದು."
[صحيح] - [متفق عليه] - [صحيح البخاري - 2856]
ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ದಾಸರ ಮೇಲಿರುವ ಅಲ್ಲಾಹನ ಹಕ್ಕನ್ನು ಮತ್ತು ಅಲ್ಲಾಹನ ಮೇಲಿರುವ ದಾಸರ ಹಕ್ಕನ್ನು ವಿವರಿಸುತ್ತಿದ್ದಾರೆ. ದಾಸರ ಮೇಲಿರುವ ಅಲ್ಲಾಹನ ಹಕ್ಕು ಏನೆಂದರೆ ಅವರು ಅವನನ್ನು ಮಾತ್ರ ಆರಾಧಿಸಬೇಕು ಮತ್ತು ಅವನೊಂದಿಗೆ ಏನನ್ನೂ ಸಹಭಾಗಿಯಾಗಿ ಮಾಡಬಾರದು. ಅಲ್ಲಾಹನ ಮೇಲಿರುವ ದಾಸರ ಹಕ್ಕು ಏನೆಂದರೆ ಅವನೊಂದಿಗೆ ಏನನ್ನೂ ಸಹಭಾಗಿಯನ್ನಾಗಿ ಮಾಡದ ಏಕದೇವ ವಿಶ್ವಾಸಿಗಳನ್ನು ಅವನು ಶಿಕ್ಷಿಸಬಾರದು. ನಂತರ ಮುಆದ್ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಈ ಅನುಗ್ರಹದ ಬಗ್ಗೆ ಜನರು ಸಂತೋಷಪಡುವುದಕ್ಕಾಗಿ ನಾನು ಈ ಸಿಹಿ ಸುದ್ದಿಯನ್ನು ಅವರಿಗೆ ತಿಳಿಸಲೇ?" ಆದರೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರು ಅದರ ಮೇಲೆ ಅವಲಂಬಿತರಾಗುವರು ಎಂಬ ಭಯದಿಂದ ಅದನ್ನು ತಡೆದರು.