عَنْ أَبِي سَعِيدٍ الخُدْرِيِّ رَضِيَ اللَّهُ عَنْهُ قَالَ: قَالَ رَسُولُ اللَّهِ صَلَّى اللهُ عَلَيْهِ وَسَلَّمَ:
«يُؤْتَى بِالْمَوْتِ كَهَيْئَةِ كَبْشٍ أَمْلَحَ، فَيُنَادِي مُنَادٍ: يَا أَهْلَ الجَنَّةِ، فَيَشْرَئِبُّونَ وَيَنْظُرُونَ، فَيَقُولُ: هَلْ تَعْرِفُونَ هَذَا؟ فَيَقُولُونَ: نَعَمْ، هَذَا المَوْتُ، وَكُلُّهُمْ قَدْ رَآهُ، ثُمَّ يُنَادِي: يَا أَهْلَ النَّارِ، فَيَشْرَئِبُّونَ وَيَنْظُرُونَ، فَيَقُولُ: وهَلْ تَعْرِفُونَ هَذَا؟ فَيَقُولُونَ: نَعَمْ، هَذَا المَوْتُ، وَكُلُّهُمْ قَدْ رَآهُ، فَيُذْبَحُ ثُمَّ يَقُولُ: يَا أَهْلَ الجَنَّةِ خُلُودٌ فَلاَ مَوْتَ، وَيَا أَهْلَ النَّارِ خُلُودٌ فَلاَ مَوْتَ، ثُمَّ قَرَأَ: {وَأَنْذِرْهُمْ يَوْمَ الحَسْرَةِ إِذْ قُضِيَ الأَمْرُ وَهُمْ فِي غَفْلَةٍ} [مريم: 39]، وَهَؤُلاَءِ فِي غَفْلَةٍ أَهْلُ الدُّنْيَا {وَهُمْ لاَ يُؤْمِنُونَ} [مريم: 39]».
[صحيح] - [متفق عليه] - [صحيح البخاري: 4730]
المزيــد ...
ಅಬೂ ಸಈದ್ ಖುದ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು. ಆಗ ಒಬ್ಬರು, "ಓ ಸ್ವರ್ಗವಾಸಿಗಳೇ!" ಎಂದು ಕೂಗಿ ಕರೆಯುವರು. ಆಗ ಸ್ವರ್ಗವಾಸಿಗಳು ತಮ್ಮ ಕತ್ತುಗಳನ್ನೆತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ಸ್ವರ್ಗವಾಸಿಗಳು ಉತ್ತರಿಸುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿದ ಬಳಿಕ ಅವರು, "ಓ ನರಕವಾಸಿಗಳೇ" ಎಂದು ಕೂಗಿ ಕರೆಯುವರು. ಆಗ ನರಕವಾಸಿಗಳು ತಮ್ಮ ಕತ್ತುಗಳನ್ನೆತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ನರಕವಾಸಿಗಳು ಉತ್ತರಿಸುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿದ ಬಳಿಕ ಅದನ್ನು ಕೊಯ್ಯಲಾಗುವುದು. ನಂತರ ಅವರು ಹೇಳುವರು: "ಓ ಸ್ವರ್ಗವಾಸಿಗಳೇ, ನೀವು ಶಾಶ್ವತರು. ಇನ್ನು ನಿಮಗೆ ಸಾವಿಲ್ಲ. ಓ ನರಕವಾಸಿಗಳೇ, ನೀವು ಶಾಶ್ವತರು. ಇನ್ನು ನಿಮಗೆ ಸಾವಿಲ್ಲ." ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: “ಮತ್ತು ಎಲ್ಲಾ ಕಾರ್ಯಗಳಿಗೂ ತೀರ್ಪು ನೀಡಲಾಗುವ ಆ ವ್ಯಥೆಯ ದಿನದ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿರಿ. ಆದರೆ ಅವರು ನಿರ್ಲಕ್ಷ್ಯದಲ್ಲಿದ್ದಾರೆ.” [ಮರ್ಯಮ್ 39] ಇಹಲೋಕದ ಈ ಜನರು ನಿರ್ಲಕ್ಷ್ಯದಲ್ಲಿದ್ದಾರೆ. "ಮತ್ತು ಅವರ ವಿಶ್ವಾಸವಿಡುವುದಿಲ್ಲ." [ಮರ್ಯಮ್ 39]
[صحيح] - [متفق عليه] - [صحيح البخاري - 4730]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಪುನರುತ್ಥಾನ ದಿನದಂದು ಸಾವನ್ನು ಕಪ್ಪು ಬಿಳುಪು ರೋಮಗಳಿರುವ ಟಗರಿನ ರೂಪದಲ್ಲಿ ತರಲಾಗುವುದು. ಆಗ ಒಬ್ಬರು ಕೂಗಿ ಹೇಳುವರು: "ಓ ಸ್ವರ್ಗವಾಸಿಗಳೇ!" ಆಗ ಸ್ವರ್ಗವಾಸಿಗಳು ತಮ್ಮ ಕತ್ತುಗಳನ್ನು ಮತ್ತು ತಲೆಗಳನ್ನು ಎತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ಅವರು ಹೇಳುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿ ತಿಳಿಯುವರು. ನಂತರ ಅವರು ಕೂಗಿ ಕರೆಯುವರು: "ಓ ನರಕವಾಸಿಗಳೇ!" ಆಗ ನರಕವಾಸಿಗಳು ತಮ್ಮ ಕತ್ತುಗಳನ್ನು ಮತ್ತು ತಲೆಗಳನ್ನು ಎತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ಅವರು ಹೇಳುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿ ತಿಳಿಯುವರು. ನಂತರ ಅದನ್ನು ಕೊಯ್ಯಲಾಗುವುದು. ನಂತರ ಅವರು ಕೂಗಿ ಹೇಳುವರು: "ಓ ಸ್ವರ್ಗವಾಸಿಗಳೇ! ನೀವು ಶಾಶ್ವತವಾಗಿ ಸ್ವರ್ಗದಲ್ಲಿರುವಿರಿ. ಇನ್ನು ನಿಮಗೆ ಸಾವಿಲ್ಲ. ಓ ನರಕವಾಸಿಗಳೇ! ನೀವು ಶಾಶ್ವತವಾಗಿ ನರಕದಲ್ಲಿರುವಿರಿ. ಇನ್ನು ನಿಮಗೆ ಸಾವಿಲ್ಲ." ಇದು ಸತ್ಯವಿಶ್ವಾಸಿಗಳಿಗೆ ದೊರೆಯುವ ಅನುಗ್ರಹಗಳಿಗೆ ಮತ್ತು ಸತ್ಯನಿಷೇಧಿಗಳಿಗೆ ದೊರೆಯುವ ಶಿಕ್ಷೆಗೆ ಒಂದು ಹೆಚ್ಚುವರಿ ಸೇರ್ಪಡೆಯಾಗಿದೆ. ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಈ ವಚನವನ್ನು ಪಠಿಸಿದರು: “ಮತ್ತು ಎಲ್ಲಾ ಕಾರ್ಯಗಳಿಗೂ ತೀರ್ಪು ನೀಡಲಾಗುವ ಆ ವ್ಯಥೆಯ ದಿನದ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿರಿ. ಆದರೆ ಅವರು ನಿರ್ಲಕ್ಷ್ಯದಲ್ಲಿದ್ದಾರೆ. ಮತ್ತು ಅವರು ವಿಶ್ವಾಸವಿಡುವುದಿಲ್ಲ.” [ಮರ್ಯಮ್ 39] ಪುನರುತ್ಥಾನ ದಿನದಂದು ಸ್ವರ್ಗವಾಸಿಗಳನ್ನು ಮತ್ತು ನರಕವಾಸಿಗಳನ್ನು ಬೇರ್ಪಡಿಸಲಾಗುತ್ತದೆ. ಪ್ರತಿಯೊಬ್ಬರು ತಮ್ಮ ತಮ್ಮ ಶಾಶ್ವತ ಠಿಕಾಣಿಗಳಿಗೆ ತೆರಳುತ್ತಾರೆ. ಆಗ ಕೆಡುಕು ಮಾಡಿದವರು ಒಳಿತು ಮಾಡಲಿಲ್ಲವಲ್ಲ ಎಂದು ಕೊರಗುವರು ಮತ್ತು (ಸತ್ಕರ್ಮಗಳಲ್ಲಿ) ಕೊರತೆ ಮಾಡಿದವರು ಹೆಚ್ಚು ಸತ್ಕರ್ಮಗಳನ್ನು ನಿರ್ವಹಿಸಲಿಲ್ಲವಲ್ಲ ಎಂದು ಅಲವತ್ತುಕೊಳ್ಳುವರು.