عن أبي هريرة رضي الله عنه قال: قال رسول الله صلى الله عليه وسلم:
«مَنْ كَذَبَ عَلَيَّ مُتَعَمِّدًا فَلْيَتَبَوَّأْ مَقْعَدَهُ مِنَ النَّارِ».
[صحيح] - [متفق عليه] - [صحيح البخاري: 110]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."
[صحيح] - [متفق عليه] - [صحيح البخاري - 110]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಅವರ ಮೇಲೆ ಮನಃಪೂರ್ವಕ ಸುಳ್ಳು ಹೇಳುತ್ತಾರೋ, ಅದು ಮಾತು ಅಥವಾ ಕ್ರಿಯೆಯ ಬಗ್ಗೆಯಾಗಿದ್ದರೂ, ಅವರ ಮೇಲೆ ಸುಳ್ಳು ಹೇಳಿದ್ದಕ್ಕಾಗಿ ಪರಲೋಕದಲ್ಲಿ ಅವರಿಗೆ ನರಕದಲ್ಲಿ ಆಸನ ದೊರೆಯುವುದು.