عَنْ النَّوَّاسِ بْنِ سَمْعَانَ الْأَنْصَارِيِّ رضي الله عنه عَنْ رَسُولِ اللهِ صَلَّى اللهُ عَلَيْهِ وَسَلَّمَ قَالَ:
«ضَرَبَ اللهُ مَثَلًا صِرَاطًا مُسْتَقِيمًا، وَعَلَى جَنْبَتَيْ الصِّرَاطِ سُورَانِ، فِيهِمَا أَبْوَابٌ مُفَتَّحَةٌ، وَعَلَى الْأَبْوَابِ سُتُورٌ مُرْخَاةٌ، وَعَلَى بَابِ الصِّرَاطِ دَاعٍ يَقُولُ: أَيُّهَا النَّاسُ، ادْخُلُوا الصِّرَاطَ جَمِيعًا، وَلَا تَتَعَرَّجُوا، وَدَاعٍ يَدْعُو مِنْ فَوْقِ الصِّرَاطِ، فَإِذَا أَرَادَ يَفْتَحُ شَيْئًا مِنْ تِلْكَ الْأَبْوَابِ، قَالَ: وَيْحَكَ لَا تَفْتَحْهُ، فَإِنَّكَ إِنْ تَفْتَحْهُ تَلِجْهُ، وَالصِّرَاطُ الْإِسْلَامُ، وَالسُّورَانِ: حُدُودُ اللهِ، وَالْأَبْوَابُ الْمُفَتَّحَةُ: مَحَارِمُ اللهِ، وَذَلِكَ الدَّاعِي عَلَى رَأْسِ الصِّرَاطِ: كِتَابُ اللهِ، وَالدَّاعِي مِنِ فَوْقَ الصِّرَاطِ: وَاعِظُ اللهِ فِي قَلْبِ كُلِّ مُسْلِمٍ».
[صحيح] - [رواه الترمذي وأحمد] - [مسند أحمد: 17634]
المزيــد ...
ನವ್ವಾಸ್ ಬಿನ್ ಸಮ್‌ಆನ್ ಅನ್ಸಾರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ. ಆ ನೇರ ಮಾರ್ಗದ ಎರಡು ಬದಿಗಳಲ್ಲೂ ಗೋಡೆಗಳಿವೆ. ಆ ಗೋಡೆಗಳಲ್ಲಿ ತೆರೆದುಕೊಂಡಿರುವ ಅನೇಕ ಬಾಗಿಲುಗಳಿವೆ. ಆ ಬಾಗಿಲುಗಳಲ್ಲಿ ಪರದೆಗಳನ್ನು ಹಾಕಲಾಗಿದೆ. ಆ ನೇರ ಮಾರ್ಗದಲ್ಲಿ ಒಬ್ಬ ವ್ಯಕ್ತಿ ಕೂಗಿ ಹೇಳುತ್ತಿರುತ್ತಾನೆ: "ಓ ಜನರೇ! ನೀವೆಲ್ಲರೂ ನೇರ ಮಾರ್ಗವನ್ನು ಪ್ರವೇಶಿರಿ. ಅತ್ತಿತ್ತ ತಿರುಗದೆ ನೇರವಾಗಿ ನಡೆಯಿರಿ." ಆ ಮಾರ್ಗದ ಮೇಲ್ಭಾಗದಲ್ಲಿ ಒಬ್ಬ ವ್ಯಕ್ತಿಯಿದ್ದು, ಆ ಬಾಗಿಲುಗಳಲ್ಲಿ ಯಾವುದಾದರೂ ಬಾಗಿಲನ್ನು ತೆರೆಯಲು ಪ್ರಯತ್ನಿಸಿದರೆ, ಅವನು ಕೂಗಿ ಹೇಳುತ್ತಾನೆ: "ನಿನಗೆ ದುರದೃಷ್ಟ ಕಾದಿದೆ! ಆ ಬಾಗಿಲನ್ನು ತೆರೆಯಬೇಡ. ನೀನು ಅದನ್ನು ತೆರೆದರೆ ಅದರ ಒಳಗೆ ಪ್ರವೇಶಿಸಿ ಬಿಡುವೆ." ಆ ನೇರ ಮಾರ್ಗವು ಇಸ್ಲಾಂ ಧರ್ಮವಾಗಿದೆ. ಆ ಎರಡು ಗೋಡೆಗಳು ಅಲ್ಲಾಹನ ಎಲ್ಲೆಗಳಾಗಿವೆ. ತೆರೆದುಕೊಂಡಿರುವ ಬಾಗಿಲುಗಳು ಅಲ್ಲಾಹು ನಿಷೇಧಿತ ವಲಯಗಳಾಗಿವೆ. ಆ ನೇರ ಮಾರ್ಗದ ಪ್ರವೇಶದ್ವಾರದಲ್ಲಿ ಕೂಗಿ ಕರೆಯುವುದು ಅಲ್ಲಾಹನ ಗ್ರಂಥವಾಗಿದೆ. ಆ ಮಾರ್ಗದ ಮೇಲ್ಭಾಗದಿಂದ ಕೂಗಿ ಕರೆಯುವುದು ಪ್ರತಿಯೊಬ್ಬ ಮುಸಲ್ಮಾನನ ಹೃದಯದಲ್ಲಿರುವ ಅಲ್ಲಾಹನ ಉಪದೇಶಕವಾಗಿದೆ."
[صحيح] - [رواه الترمذي وأحمد] - [مسند أحمد - 17634]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ: ಅಲ್ಲಾಹು ಇಸ್ಲಾಂ ಧರ್ಮವನ್ನು ವಿವರಿಸಲು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ. ಅದು ಉದ್ದಕ್ಕೆ ಚಾಚಿಕೊಂಡಿರುವ ಒಂದು ಮಾರ್ಗವಾಗಿದ್ದು ಅದರಲ್ಲಿ ಯಾವುದೇ ವಕ್ರತೆಗಳಿಲ್ಲ. ಆ ಮಾರ್ಗದ ಇಕ್ಕೆಲಗಳಲ್ಲಿ ಎರಡು ಗೋಡೆಗಳಿವೆ. ಆ ಗೋಡೆಗಳು ಆ ಮಾರ್ಗವನ್ನು ಎರಡು ಬದಿಗಳಿಂದಲೂ ಸುತ್ತುವರಿಯುತ್ತವೆ. ಈ ಗೋಡೆಗಳು ಅಲ್ಲಾಹನ ಗಡಿಗಳಾಗಿವೆ. ಈ ಎರಡೂ ಗೋಡೆಗಳಲ್ಲಿ ಅನೇಕ ಬಾಗಿಲುಗಳಿವೆ. ಇವು ಅಲ್ಲಾಹು ನಿಷೇಧಿಸಿದ ಕಾರ್ಯಗಳಾಗಿವೆ. ಆ ಬಾಗಿಲುಗಳಿಗೆ ಪರದೆಗಳನ್ನು ಹಾಕಲಾಗಿದ್ದು ಅದರೊಳಗಿರುವುದು ಹೊರಗಿನವರಿಗೆ ಕಾಣುವುದಿಲ್ಲ. ಆ ಮಾರ್ಗದ ಪ್ರವೇಶದ್ವಾರದಲ್ಲಿ ಒಬ್ಬ ವ್ಯಕ್ತಿಯಿದ್ದು ಆತ ಜನರಿಗೆ ಆದೇಶ ನಿರ್ದೇಶನಗಳನ್ನು ನೀಡುತ್ತಾ ಹೇಳುತ್ತಾನೆ: "ನೀವು ನೇರವಾಗಿ ನಡೆಯಿರಿ. ಅತ್ತಿತ್ತ ತಿರುಗಬೇಡಿ." ಇದು ಅಲ್ಲಾಹನ ಗ್ರಂಥ (ಕುರ್‌ಆನ್). ಆ ಮಾರ್ಗದ ಮೇಲ್ಭಾಗದಲ್ಲಿ ಇನ್ನೊಬ್ಬ ವ್ಯಕ್ತಿಯಿದ್ದಾನೆ. ನೇರಮಾರ್ಗದಲ್ಲಿ ನಡೆಯುವವರು ಆ ಬಾಗಿಲುಗಳಿಗೆ ಹಾಕಲಾದ ಪರದೆಗಳನ್ನು ಸ್ವಲ್ಪ ಸರಿಸಲು ಪ್ರಯತ್ನಿಸುವಾಗ ಆತ ಅವರನ್ನು ಗದರಿಸುತ್ತಾ ಹೇಳುತ್ತಾನೆ: "ನಿನಗೆ ದುರದೃಷ್ಟ ಕಾದಿದೆ! ಅದನ್ನು ತೆರೆಯಬೇಡ. ನೀನು ಅದನ್ನು ತೆರೆದು ಬಿಟ್ಟರೆ ಅದರೊಳಗೆ ಪ್ರವೇಶ ಮಾಡುವೆ. ಅದನ್ನು ಪ್ರವೇಶ ಮಾಡದಂತೆ ನಿನ್ನ ಮನಸ್ಸನ್ನು ನಿಯಂತ್ರಿಸಲು ನಿನಗೆ ಸಾಧ್ಯವಿಲ್ಲ." ಇದು ಪ್ರತಿಯೊಬ್ಬ ಮುಸಲ್ಮಾನನ ಹೃದಯದಲ್ಲಿರುವ ಅಲ್ಲಾಹನ ಕಡೆಯ ಆತ್ಮಸಾಕ್ಷಿಯಾಗಿದೆ.