+ -

عَنْ ‌عَائِشَةَ رضي الله عنها:
أَنَّ النَّبِيَّ صَلَّى اللهُ عَلَيْهِ وَسَلَّمَ كَانَ إِذَا أَوَى إِلَى فِرَاشِهِ كُلَّ لَيْلَةٍ جَمَعَ كَفَّيْهِ، ثُمَّ نَفَثَ فِيهِمَا فَقَرَأَ فِيهِمَا: {قُلْ هُوَ اللهُ أَحَدٌ}، وَ{قُلْ أَعُوذُ بِرَبِّ الْفَلَقِ}، وَ{قُلْ أَعُوذُ بِرَبِّ النَّاسِ}، ثُمَّ يَمْسَحُ بِهِمَا مَا اسْتَطَاعَ مِنْ جَسَدِهِ، يَبْدَأُ بِهِمَا عَلَى رَأْسِهِ وَوَجْهِهِ وَمَا أَقْبَلَ مِنْ جَسَدِهِ، يَفْعَلُ ذَلِكَ ثَلَاثَ مَرَّاتٍ.

[صحيح] - [رواه البخاري] - [صحيح البخاري: 5017]
المزيــد ...

ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ರಾತ್ರಿಗಳಲ್ಲೂ ಮಲಗಲು ಹೊರಡುವಾಗ ತಮ್ಮ ಎರಡು ಅಂಗೈಗಳನ್ನು ಜೋಡಿಸುತ್ತಿದ್ದರು. ನಂತರ ಅದಕ್ಕೆ ಮೂರು ಬಾರಿ ಉಗಿದು "ಕುಲ್ ಹುವಲ್ಲಾಹು ಅಹದ್", "ಕುಲ್ ಅಊದು ಬಿರಬ್ಬಿಲ್ ಫಲಕ್" ಮತ್ತು "ಕುಲ್ ಅಊದು ಬಿರಬ್ಬಿ ನ್ನಾಸ್" ಪಠಿಸುತ್ತಿದ್ದರು. ನಂತರ ದೇಹದಲ್ಲಿ ತಲುಪಲು ಸಾಧ್ಯವಾಗುವ ಎಲ್ಲಾ ಭಾಗಗಳನ್ನು ಕೈಗಳಿಂದ ಸವರುತ್ತಿದ್ದರು. ಅವರು ಮೊದಲು ತಲೆಯಿಂದ ಆರಂಭಿಸುತ್ತಿದ್ದರು, ನಂತರ ಮುಖವನ್ನು ಸವರುತ್ತಿದ್ದರು, ನಂತರ ದೇಹದ ಮುಂಭಾಗವನ್ನು ಸವರುತ್ತಿದ್ದರು. ಅವರು ಇದನ್ನು ಮೂರು ಸಲ ಆವರ್ತಿಸುತ್ತಿದ್ದರು."

[صحيح] - [رواه البخاري] - [صحيح البخاري - 5017]

ವಿವರಣೆ

ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರಾತ್ರಿ ಮಲಗಲು ಹೊರಡುವಾಗ, ಪ್ರಾರ್ಥಿಸುವವನು ಮಾಡುವಂತೆ ತನ್ನ ಅಂಗೈಗಳನ್ನು ಜೋಡಿಸಿ, ಅದಕ್ಕೆ ಹಗುರವಾಗಿ ಸ್ವಲ್ಪ ಉಗುಳು ಬರುವಂತೆ ಉಗಿಯುತ್ತಿದ್ದರು. ನಂತರ ಮೂರು ಸೂರಗಳನ್ನು ಪಠಿಸುತಿದ್ದರು, "ಕುಲ್ ಹುವಲ್ಲಾಹು ಅಹದ್", "ಕುಲ್ ಅಊದು ಬಿರಬ್ಬಿಲ್ ಫಲಕ್" ಮತ್ತು "ಕುಲ್ ಅಊದು ಬಿರಬ್ಬಿ ನ್ನಾಸ್." ನಂತರ ದೇಹದಲ್ಲಿ ತಲುಪಬಹುದಾದ ಎಲ್ಲಾ ಭಾಗಗಳನ್ನು ಸವರುತ್ತಿದ್ದರು. ಮೊದಲು ತಲೆಯಿಂದ ಆರಂಭಿಸಿ, ನಂತರ ಮುಖವನ್ನು, ನಂತರ ದೇಹದ ಮುಂಭಾಗವನ್ನು ಸವರುತ್ತಿದ್ದರು. ಅವರು ಇದನ್ನು ಮೂರು ಸಲ ಮಾಡುತ್ತಿದ್ದರು.

ಅನುವಾದ: ಆಂಗ್ಲ ಉರ್ದು ಸ್ಪ್ಯಾನಿಷ್ ಇಂಡೋನೇಷಿಯನ್ ಉಯ್ಘರ್ ಬಂಗಾಳಿ ಫ್ರೆಂಚ್ ತುರ್ಕಿ ರಷ್ಯನ್ ಬೊಸ್ನಿಯನ್ ಸಿಂಹಳೀಯ ಹಿಂದಿ ಚೀನೀ ಪರ್ಷಿಯನ್ ವಿಯೆಟ್ನಾಮೀಸ್ ಟ್ಯಾಗಲಾಗ್ ಕುರ್ದಿಷ್ ಹೌಸಾ ಪೋರ್ಚುಗೀಸ್ ಮಲಯಾಳಂ ತೆಲುಗು ಸ್ವಾಹಿಲಿ ತಮಿಳು ಬರ್ಮೀ ಥಾಯ್ ಜರ್ಮನ್ ಪಶ್ತೋ الأسامية الألبانية السويدية الأمهرية الهولندية الغوجاراتية القيرقيزية النيبالية اليوروبا الليتوانية الدرية الصربية الصومالية الطاجيكية الكينياروندا الرومانية المجرية التشيكية الموري المالاجاشية الفولانية الإيطالية الأورومو الولوف البلغارية الأذربيجانية اليونانية الأوزبكية الأوكرانية الجورجية اللينجالا المقدونية
ಅನುವಾದಗಳನ್ನು ತೋರಿಸಿ

ಹದೀಸಿನ ಪ್ರಯೋಜನಗಳು

  1. ಮಲಗುವುದಕ್ಕೆ ಮುಂಚೆ ಸೂರ ಇಖ್ಲಾಸ್ ಮತ್ತು ಮುಅವ್ವಿದತೈನ್ (ಸೂರ ಫಲಕ್ ಮತ್ತು ಸೂರ ನಾಸ್) ಪಠಿಸಿ, ಅಂಗೈಗಳಿಗೆ ಉಗುಳಿ ದೇಹದ ಎಲ್ಲಾ ಭಾಗಗಳನ್ನು ಸವರುವುದು ಅಪೇಕ್ಷಣೀಯವಾಗಿದೆಯೆಂದು ಈ ಹದೀಸ್ ತಿಳಿಸುತ್ತದೆ.
ಇನ್ನಷ್ಟು