عَنْ الزُّبَيْرِ بْنِ الْعَوَّامِ قَالَ:
لَمَّا نَزَلَتْ: {ثُمَّ لَتُسْأَلُنَّ يَوْمَئِذٍ عَنِ النَّعِيمِ} [التكاثر: 8]، قَالَ الزُّبَيْرُ: يَا رَسُولَ اللهِ، وَأَيُّ النَّعِيمِ نُسْأَلُ عَنْهُ، وَإِنَّمَا هُمَا الْأَسْوَدَانِ التَّمْرُ وَالْمَاءُ؟ قَالَ: «أَمَا إِنَّهُ سَيَكُونُ».
[حسن] - [رواه الترمذي وابن ماجه] - [سنن الترمذي: 3356]
المزيــد ...
ಝುಬೈರ್ ಇಬ್ನ್ ಅಲ್ಅವ್ವಾಮ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು." [ಅತ್ತಕಾಸುರ್ 102:8] ಎಂಬ ವಚನವು ಅವತೀರ್ಣವಾದಾಗ, ಝುಬೈರ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಯಾವ ಅನುಗ್ರಹದ ಬಗ್ಗೆ ನಮ್ಮೊಡನೆ ಪ್ರಶ್ನಿಸಲಾಗುತ್ತದೆ? ನಮ್ಮಲ್ಲಿರುವುದು ಎರಡು ಕಪ್ಪು ವಸ್ತುಗಳು—،ಖರ್ಜೂರ ಮತ್ತು ನೀರು ಮಾತ್ರವಲ್ಲವೇ? ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅದು ಖಂಡಿತವಾಗಿಯೂ ಸಂಭವಿಸುತ್ತದೆ."
[حسن] - [رواه الترمذي وابن ماجه] - [سنن الترمذي - 3356]
ಈ ವಚನವು ಅವತೀರ್ಣವಾದಾಗ: "ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು." ಅಂದರೆ, ಅಲ್ಲಾಹು ನಿಮಗೆ ಅನುಗ್ರಹಿಸಿದ ಅನುಗ್ರಹಗಳಿಗೆ ನೀವು ಕೃತಜ್ಞರಾಗಿದ್ದೀರಾ ಎಂದು ನಿಮ್ಮೊಡನೆ ಪ್ರಶ್ನಿಸಲಾಗುವುದು. ಆಗ ಝುಬೈರ್ ಬಿನ್ ಅವ್ವಾಮ್ (ಅವರ ಬಗ್ಗೆ ಅಲ್ಲಾಹು ಸಂಪ್ರೀತನಾಗಲಿ) ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಮ್ಮೊಂದಿಗೆ ಯಾವ ಅನುಗ್ರಹದ ಬಗ್ಗೆ ಪ್ರಶ್ನಿಸಲಾಗುತ್ತದೆ? ನಮ್ಮಲ್ಲಿರುವ ಎರಡು ಅನುಗ್ರಹಗಳು ಖರ್ಜೂರ ಮತ್ತು ನೀರು ಆಗಿದ್ದು, ಅದು ಪ್ರಶ್ನಿಸಲಾಗುವಷ್ಟು ದೊಡ್ಡ ಅನುಗ್ರಹಗಳಲ್ಲವಲ್ಲ?"
ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಈಗ ನೀವು ಯಾವ ಸ್ಥಿತಿಯಲ್ಲಿದ್ದೀರೋ ಆ ಅನುಗ್ರಹಗಳ ಬಗ್ಗೆಯೂ ನಿಮ್ಮಲ್ಲಿ ಪ್ರಶ್ನಿಸಲಾಗುವುದು. ಇವೆರಡು (ಖರ್ಜೂರ ಮತ್ತು ನೀರು) ಅಲ್ಲಾಹನ ಅನುಗ್ರಹಗಳಲ್ಲಿ ಸೇರಿದ ಎರಡು ಮಹಾ ಅನುಗ್ರಹಗಳಾಗಿವೆ."