عَنْ عَبْدِ اللهِ بْنِ زَيْدٍ رضي الله عنه:
أَنَّ النَّبِيَّ صَلَّى اللهُ عَلَيْهِ وَسَلَّمَ تَوَضَّأَ مَرَّتَيْنِ مَرَّتَيْنِ.
[صحيح] - [رواه البخاري] - [صحيح البخاري: 158]
المزيــد ...
ಅಬ್ದುಲ್ಲಾ ಬಿನ್ ಝೈದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
"ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂಗಗಳನ್ನು ಎರಡೆರಡು ಬಾರಿ ತೊಳೆಯುವ ಮೂಲಕ ವುದೂ ನಿರ್ವಹಿಸಿದರು."
[صحيح] - [رواه البخاري] - [صحيح البخاري - 158]
ಕೆಲವು ಸಂದರ್ಭಗಳಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂವಿನ ಅಂಗಗಳನ್ನು ಎರಡೆರಡು ಬಾರಿ ತೊಳೆಯುತ್ತಾ ವುದೂ ನಿರ್ವಹಿಸುತ್ತಿದ್ದರು. ಅವರು ಮುಖ—ಬಾಯಿ ಮುಕ್ಕಳಿಸುವುದು ಮತ್ತು ಮೂಗಿಗೆ ನೀರೆಳೆಯುವುದು ಅದರಲ್ಲಿ ಒಳಪಡುತ್ತದೆ—, ಕೈಗಳು ಮತ್ತು ಕಾಲುಗಳನ್ನು ಎರಡೆರಡು ಬಾರಿ ತೊಳೆಯುತ್ತಿದ್ದರು.