عَنْ أَبِي قَتَادَةَ السَّلَمِيِّ رضي الله عنه أَنَّ رَسُولَ اللهِ صَلَّى اللهُ عَلَيْهِ وَسَلَّمَ قَالَ:
«إِذَا دَخَلَ أَحَدُكُمُ الْمَسْجِدَ فَلْيَرْكَعْ رَكْعَتَيْنِ قَبْلَ أَنْ يَجْلِسَ».
[صحيح] - [متفق عليه] - [صحيح البخاري: 444]
المزيــد ...
ಅಬೂ ಕತಾದ ಅಸ್ಸಲಮಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನಿಮ್ಮಲ್ಲೊಬ್ಬರು ಮಸೀದಿಯೊಳಗೆ ಪ್ರವೇಶ ಮಾಡಿದರೆ ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲಿ."
[صحيح] - [متفق عليه] - [صحيح البخاري - 444]
ಒಬ್ಬರು ಮಸೀದಿಗೆ ಯಾವ ಸಮಯದಲ್ಲಿ ಬಂದರೂ, ಯಾವ ಉದ್ದೇಶದಿಂದ ಬಂದರೂ, ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರೋತ್ಸಾಹಿಸಿದ್ದಾರೆ. ಇದನ್ನು ತಹಿಯ್ಯತುಲ್ ಮಸ್ಜಿದ್ ನಮಾಝ್ ಎನ್ನಲಾಗುತ್ತದೆ.