عَنْ أَبِي حُمَيْدٍ أَوْ عَنْ أَبِي أُسَيْدٍ قَالَ: قَالَ رَسُولُ اللهِ صَلَّى اللهُ عَلَيْهِ وَسَلَّمَ:
«إِذَا دَخَلَ أَحَدُكُمُ الْمَسْجِدَ فَلْيَقُلِ: اللَّهُمَّ افْتَحْ لِي أَبْوَابَ رَحْمَتِكَ، وَإِذَا خَرَجَ فَلْيَقُلِ: اللَّهُمَّ إِنِّي أَسْأَلُكَ مِنْ فَضْلِكَ».
[صحيح] - [رواه مسلم] - [صحيح مسلم: 713]
المزيــد ...
ಅಬೂ ಹುಮೈದ್ ಅಥವಾ ಅಬೂ ಉಸೈದ್ ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು ಹೊರಬರುವಾಗ, 'ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್' (ಓ ಅಲ್ಲಾಹ್! ನಿನ್ನ ಔದಾರ್ಯದಿಂದ ನಾನು ನಿನ್ನಲ್ಲಿ ಬೇಡುತ್ತೇನೆ) ಎಂದು ಹೇಳಬೇಕು."
[صحيح] - [رواه مسلم] - [صحيح مسلم - 713]
ಮಸೀದಿಯನ್ನು ಪ್ರವೇಶಿಸುವಾಗ ಹೇಳಬೇಕಾದ ಪ್ರಾರ್ಥನೆಯನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಕಲಿಸಿಕೊಡುತ್ತಿದ್ದಾರೆ. ಅದು ಹೀಗಿದೆ: "ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್." ಇಲ್ಲಿ ಅಲ್ಲಾಹನೊಂದಿಗೆ ಅವನ ದಯೆಯ ಬಾಗಿಲುಗಳನ್ನು ತೆರೆದುಕೊಡುವಂತೆ ಬೇಡಲಾಗುತ್ತಿದೆ. ಮಸೀದಿಯಿಂದ ಹೊರ ಬರುವಾಗ ಈ ಪ್ರಾರ್ಥನೆಯನ್ನು ಹೇಳಬೇಕಾಗಿದೆ: "ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್." ಇಲ್ಲಿ ಅಲ್ಲಾಹನೊಂದಿಗೆ ಅವನ ಔದಾರ್ಯವನ್ನು ಮತ್ತು ಧರ್ಮಸಮ್ಮತವಾದ ಉಪಜೀವನ ಸೇರಿದಂತೆ ಅವನಿಂದ ಹೆಚ್ಚಿನ ಸಹಾಯವನ್ನು ಕೇಳಲಾಗುತ್ತಿದೆ.