عن حُذَيْفَةَ رضي الله عنه:
أَنَّ النَّبِيَّ صَلَّى اللَّهُ عَلَيْهِ وَسَلَّمَ كَانَ يَقُولُ بَيْنَ السَّجْدَتَيْنِ: «رَبِّ اغْفِرْ لِي، رَبِّ اغْفِرْ لِي».
[صحيح] - [رواه أبو داود والنسائي وابن ماجه وأحمد] - [سنن ابن ماجه: 897]
المزيــد ...
ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ:
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ರಬ್ಬಿಗ್ಫಿರ್ ಲೀ, ರಬ್ಬಿಗ್ಫಿರ್ ಲೀ" (ಓ ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು, ಓ ನನ್ನ ಪರಿಪಾಲಕನೇ! ನನ್ನನ್ನು ಕ್ಷಮಿಸು) ಎಂದು ಹೇಳುತ್ತಿದ್ದರು.
[صحيح] - [رواه أبو داود والنسائي وابن ماجه وأحمد] - [سنن ابن ماجه - 897]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ ಕುಳಿತುಕೊಂಡು, "ರಬ್ಬಿಗ್ಫಿರ್ ಲೀ, ರಬ್ಬಿಗ್ಫಿರ್ ಲೀ" ಎಂದು ಹೇಳುತ್ತಿದ್ದರು.
"ರಬ್ಬಿಗ್ಫಿರ್ ಲೀ" ಎಂದರೆ ಅಲ್ಲಾಹನಲ್ಲಿ ಪಾಪಗಳನ್ನು ಅಳಿಸಲು ಮತ್ತು ನ್ಯೂನತೆಗಳನ್ನು ಮರೆಮಾಚಲು ಬೇಡುವುದು.