عَنْ عَلِيٍّ رَضِيَ اللهُ عَنْهُ قَالَ
كَانَ رَسُولُ اللَّهِ صَلَّى اللَّهُ عَلَيْهِ وَسَلَّمَ يُقْرِئُنَا القُرْآنَ عَلَى كُلِّ حَالٍ مَا لَمْ يَكُنْ جُنُبًا.
[حسن] - [رواه أبو داود والترمذي والنسائي وابن ماجه وأحمد] - [سنن الترمذي: 146]
المزيــد ...
ಅಲಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು:
"ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಾವು 'ಜುನುಬ್' (ಅಶುದ್ಧ) ಆಗಿರದಿದ್ದ ಹೊರತು, ಉಳಿದೆಲ್ಲಾ ಸ್ಥಿತಿಗಳಲ್ಲೂ ನಮಗೆ ಕುರ್‌ಆನ್ ಓದಿ ಕೊಡುತ್ತಿದ್ದರು."
[حسن] - [رواه أبو داود والترمذي والنسائي وابن ماجه وأحمد] - [سنن الترمذي - 146]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸಹಚರರಿಗೆ ಕುರ್‌ಆನ್ ಕಲಿಸುತ್ತಿದ್ದರು ಮತ್ತು ಅದನ್ನು ಓದಿ ಹೇಳುತ್ತಿದ್ದರು. ಅವರು ತಮ್ಮ ಪತ್ನಿಯೊಂದಿಗೆ ಸೇರಿದ ಕಾರಣದಿಂದ ಉಂಟಾಗುವ 'ಜನಾಬತ್' (ದೊಡ್ಡ ಅಶುದ್ಧಿ) ಸ್ಥಿತಿಯಲ್ಲಿ ಇಲ್ಲದಿದ್ದರೆ, ಉಳಿದೆಲ್ಲಾ ಸಂದರ್ಭಗಳಲ್ಲೂ ಅವರು ಹೀಗೆ ಮಾಡುತ್ತಿದ್ದರು.