عَن أَبِي هُرَيْرَةَ رَضيَ اللهُ عنهُ عَنْ رَسُولِ اللهِ صَلَّى اللهُ عَلَيْهِ وَسَلَّمَ قَالَ:
«إِنَّ أَدْنَى مَقْعَدِ أَحَدِكُمْ مِنَ الْجَنَّةِ أَنْ يَقُولَ لَهُ: تَمَنَّ فَيَتَمَنَّى، وَيَتَمَنَّى، فَيَقُولُ لَهُ: هَلْ تَمَنَّيْتَ؟ فَيَقُولُ: نَعَمْ، فَيَقُولُ لَهُ: فَإِنَّ لَكَ مَا تَمَنَّيْتَ وَمِثْلَهُ مَعَهُ».
[صحيح] - [رواه مسلم] - [صحيح مسلم: 182]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಸ್ವರ್ಗದಲ್ಲಿ ನಿಮ್ಮಲ್ಲೊಬ್ಬನ ಅತ್ಯಂತ ಕೆಳಮಟ್ಟದ ಸ್ಥಾನವು (ಹೇಗಿರುತ್ತದೆ) ಎಂದರೆ, ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: 'ಏನಾದರೂ ಇಚ್ಚಿಸು!'. ಆಗ ಅವನು ಇಚ್ಚಿಸುತ್ತಾನೆ, ಮತ್ತು ಇಚ್ಚಿಸುತ್ತಾನೆ (ಇಚ್ಚಿಸುತ್ತಲೇ ಇರುತ್ತಾನೆ). ನಂತರ ಅವನೊಂದಿಗೆ (ಅಲ್ಲಾಹು) ಕೇಳುತ್ತಾನೆ: 'ನೀನು (ಎಲ್ಲವನ್ನೂ) ಇಚ್ಚಿಸಿದೆಯಾ?'. ಅವನು ಹೇಳುತ್ತಾನೆ: 'ಹೌದು'. ಆಗ ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: 'ಹಾಗಾದರೆ, ನೀನು ಬಯಸಿದ್ದೆಲ್ಲವೂ ನಿನಗೆ ಖಂಡಿತ ಸಿಗುತ್ತದೆ, ಮತ್ತು ಅದರೊಂದಿಗೆ ಅದರಷ್ಟೇ (ಹೆಚ್ಚಿಗೆ ಸಿಗುತ್ತದೆ)' ".
[صحيح] - [رواه مسلم] - [صحيح مسلم - 182]
ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಸ್ವರ್ಗವನ್ನು ಪ್ರವೇಶಿಸುವವರಲ್ಲಿ ಅತ್ಯಂತ ಕೆಳಮಟ್ಟದ ಮತ್ತು ಕನಿಷ್ಠ ದರ್ಜೆಯ ವ್ಯಕ್ತಿಯೊಂದಿಗೆ (ಅಲ್ಲಾಹು) ಹೇಳುತ್ತಾನೆ: ಇಚ್ಚಿಸು. ಆಗ ಅವನು ಇಚ್ಚಿಸುತ್ತಾನೆ, ಮತ್ತು ಬಯಸುತ್ತಾನೆ, ಎಲ್ಲಿಯವರೆಗೆಂದರೆ ಅವನು ಪ್ರಕಟಿಸದಂತಹ ಯಾವುದೇ ಬಯಕೆಯೂ ಉಳಿಯುವುದಿಲ್ಲ. ನಂತರ ಅವನೊಂದಿಗೆ (ಅಲ್ಲಾಹು) ಕೇಳುತ್ತಾನೆ: ನೀನು (ಎಲ್ಲವನ್ನೂ) ಬಯಸಿದೆಯಾ? ಅವನು ಹೇಳುತ್ತಾನೆ: ಹೌದು. ಆಗ ಅವನೊಂದಿಗೆ (ಅಲ್ಲಾಹು) ಹೇಳುತ್ತಾನೆ: ಹಾಗಾದರೆ, ನೀನು ಬಯಸಿದ್ದೆಲ್ಲವೂ ನಿನಗೆ ಖಂಡಿತ ಸಿಗುತ್ತದೆ, ಮತ್ತು ಅದರೊಂದಿಗೆ ಅದರಷ್ಟೇ (ಹೆಚ್ಚಿಗೆ ಸಿಗುತ್ತದೆ).