عن عائشة رضي الله عنها قالت:
كَانَ النَّبِيُّ صَلَّى اللهُ عَلَيْهِ وَسَلَّمَ يَذْكُرُ اللهَ عَلَى كُلِّ أَحْيَانِهِ.
[صحيح] - [رواه مسلم] - [صحيح مسلم: 373]
المزيــد ...
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಸ್ಥಿತಿಗಳಲ್ಲೂ ಅಲ್ಲಾಹನನ್ನು ಸ್ಮರಿಸುತ್ತಿದ್ದರು."
[صحيح] - [رواه مسلم] - [صحيح مسلم - 373]
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಇಲ್ಲಿ ಹೇಳುವುದೇನೆಂದರೆ, ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಲ್ಲಾಹನನ್ನು ಸ್ಮರಿಸಲು ಅತೀವ ಉತ್ಸಾಹ ತೋರುತ್ತಿದ್ದರು. ಅವರು ಎಲ್ಲಾ ಸಮಯ, ಸ್ಥಳ ಮತ್ತು ಸ್ಥಿತಿಗಳಲ್ಲಿ ಅಲ್ಲಾಹನನ್ನು ಸ್ಮರಿಸುತ್ತಿದ್ದರು.